ಚಿಕ್ಕಮಗಳೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ

ಚಿಕ್ಕಮಗಳೂರು: ಇಲ್ಲಿನ ಹನುಮಂತ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ.
ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.