ಅಂಬ್ಯುಲೆನ್ಸ್ ಅಪಘಾತ'ದಲ್ಲಿ ರೋಗಿ ಮೃತಪಟ್ಟರೆ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ

ಅಂಬ್ಯುಲೆನ್ಸ್ ಅಪಘಾತ'ದಲ್ಲಿ ರೋಗಿ ಮೃತಪಟ್ಟರೆ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಅಂಬುಲೆನ್ಸ್ನಲ್ಲಿ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿ ರೋಗಿ ಮೃತಪಟ್ಟರೆ ವಿಮಾ ಕಂಪನಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ತರದ ಆದೇಶ ಹೊರಡಿಸಿದೆ.

ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ತರದ ಆದೇಶ ಹೊರಡಿಸಿದೆ.

ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಅಂಬುಲೆನ್ಸ್ನಲ್ಲಿ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿ ರೋಗಿ ಸಾವನ್ನಪ್ಪಿದ್ದರೆ ವಿಮಾ ಕಂಪನಿ ಪರಿಹಾರ ನೀಡಬೇಕು, ಆ ಪರಿಹಾರದ ಹಣವನ್ನು ಮೃತನ ಕುಟುಂಬದವರಿಗೆ ನೀಡಬೇಕು ಎಂದು ವಿಮಾ ಕಂಪನಿಗೆ ಹೈಕೋರ್ಟ್ ಆದೇಶಿಸಿದೆ

ಏನಿದು ಘಟನೆ

ಚಿಕ್ಕಮಗಳೂರಿನ ಕಬ್ಬಿನಹಳ್ಳಿ ಗ್ರಾಮದ ನಿವಾಸಿ ರವಿ ಎಂಬುವವರು ಜಾಂಡೀಸ್ ಕಾಯಿಲೆಗೆ ತುತ್ತಾಗಿದ್ದರು. ಈ ಹಿನ್ನೆಲೆ ಚಿಕಿತ್ಸೆ ಕೊಡಿಸಲು ಅವರನ್ನು 2010ರ ಏ.13ರಂದು ಹೆಚ್ಚಿನ ಮಂಗಳೂರು ಆಸ್ಪತ್ರೆಗೆ ದಾಖಲಿಸಲು ಅಂಬ್ಯುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಅಂಬ್ಯುಲೆನ್ಸ್ ಪಲ್ಟಿ ಹೊಡೆದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರವಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಎಂಎಸಿಟಿ, ಮೃತನ ಕುಟುಂಬದವರಿಗೆ ವಾರ್ಷಿಕ ಶೇ.6ರಷ್ಟು ಬಡ್ಡಿದರದೊಂದಿಗೆ 5.50 ಲಕ್ಷ ರು. ಪರಿಹಾರ ಪಾವತಿಸುವಂತೆ 2014ರ ಮಾ.3ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ವಿಮಾ ಕಂಪನಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮೃತನ ಸಾವಿಗೂ ಅಪಘಾತಕ್ಕೂ ಸಂಬಂಧವಿಲ್ಲದ ಕಾರಣ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ಹಿನ್ನೆಲೆ ವಿಚಾರಣೆ ನಡೆಸಿದ ಕೋರ್ಟ್ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಅಂಬುಲೆನ್ಸ್ನಲ್ಲಿ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿ ರೋಗಿ ಮೃತಪಟ್ಟರೆ ವಿಮಾ ಕಂಪನಿ ಪರಿಹಾರ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ತರದ ಆದೇಶ ಹೊರಡಿಸಿದೆ. ರವಿ ದುಡಿಯುತ್ತಿದ್ದ ವೇತನದ ಅಂದಾಜು ಆಧರಿಸಿ 5.5 ಲಕ್ಷ ಪರಿಹಾರವನ್ನು 4.62 ಲಕ್ಷ ರು. ಇಳಿಕೆ ಮಾಡಿ ಆ ಮೊತ್ತವನ್ನು ಎಂಟು ವಾರದಲ್ಲಿ ಮೃತನ ಕುಟುಂಬದವರಿಗೆ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶಿಸಿದೆ.