ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯಿಂದಲೇ ಹೆಂಡತಿ, ಮಕ್ಕಳ ಹತ್ಯೆ

ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯಿಂದಲೇ ಹೆಂಡತಿ, ಮಕ್ಕಳ ಹತ್ಯೆ

ಚಿಕ್ಕಬಳ್ಳಾಪುರ: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಸೇರಿ ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ವಿಷ ಸೇವಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ತಾಲೂಕಿನ ಯೆಣ್ಣೂರು ಗ್ರಾಮದಲ್ಲಿ ನಡೆದಿದೆ.

ವರ್ಷಿತಾ(12), ಸ್ನೇಹಾ(9) ಇಬ್ಬರು ಪುತ್ರಿಯರು, ಪತ್ನಿ ನೇತ್ರಾವತಿ(37) ಹತ್ಯೆಗೀಡಾದ ದುರ್ದೈವಿಗಳು.

ಇವರಿಗೆ ಬೆಂಕಿ ಹಚ್ಚಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸೊನ್ನೇಗೌಡ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.