ಅಕ್ರಮ ಹಣ ವಸೂಲಿ; ಕ್ಯಾಮೆರಾ ಕಂಡು ದಿಕ್ಕಾಪಾಲಾಗಿ ಓಡಿದ ಆರ್‌ಟಿಒ ಸಿಬ್ಬಂದಿ

ಕೊಪ್ಪಳ: ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನಗಳ ಚಾಲಕರಿಂದ ಅಕ್ರಮವಾಗಿ ಹಣ ವಸೂಲು ಮಾಡುತ್ತಿದ್ದ RTO ಅಧಿಕಾರಿಗಳು ಮಾಧ್ಯಮಗಳ ಕ್ಯಾಮೆರಾ ಕಂಡು ದಿಕ್ಕಾಪಾಲಾಗಿ ಓಡಿ ಹೋದರು. RTO ಕಚೇರಿಯ ಬ್ರೇಕ್ ಇನ್ಸ್‌ಪೆಕ್ಟರ್ ಜವರೇಗೌಡ ಅವರಿಗೆ ಲಾರಿ ಚಾಲಕನೊಬ್ಬ 50 ರೂ. ಕೊಡಲು ಬಂದಾಗ ಮಾಧ್ಯಮ ಪ್ರತಿನಿಧಿಗಳು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಮುಂದಾದರು. ಇದನ್ನು ಕಂಡ ಆರ್‌ಟಿಒ ಸಿಬ್ಬಂದಿ ಗಲಿಬಿಲಿಗೊಂಡು ರಸ್ತೆ ಪಕ್ಕದಲ್ಲಿದ್ದ ಹೊಲದಲ್ಲಿ ಓಡಿ ಹೋದರು.