ಅಕ್ರಮದ ಹಾದಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು 'ಬಿಜೆಪಿ' ಪ್ರಯತ್ನಿಸುತ್ತಿದೆ : H.D ಕುಮಾರಸ್ವಾಮಿ ಕಿಡಿ

ಅಕ್ರಮದ ಹಾದಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು 'ಬಿಜೆಪಿ' ಪ್ರಯತ್ನಿಸುತ್ತಿದೆ : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೂ, ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ.

ಚುನಾವಣೆಯಲ್ಲಿ ಅಕ್ರಮ ಮಾಡಲು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ಕೊಟ್ಟಿದ್ದಾರೆ ಎಂದು ಹೆಚ್ಡಿಕೆ ಆರೋಪಿಸಿದರು.

ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದರು. ವೋಟರ್ ಐಡಿ ಅಕ್ರಮದ ಬಗ್ಗೆ ಸಮಗ್ರ ತನಿಖೆಗೆ ಸೂಚಿಸುತ್ತೇನೆ. ಕಾಂಗ್ರೆಸ್ ನಾಯಕರು ದೂರು ನೀಡಿದರೆ ಸಮ್ರ ತನಿಖೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ.