ಅಟಲ್ ಮಿಷನ್ ನೀರು ಸರಬರಾಜು ಯೋಜನೆಗೆ ಅನುಮೋದನೆ; ಪ್ರಹ್ಲಾದ್ ಜೋಶಿ

ಅಟಲ್ ಮಿಷನ್ ನೀರು ಸರಬರಾಜು ಯೋಜನೆಗೆ ಅನುಮೋದನೆ; ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಅಟಲ್ ಮಿಷನ್ ಫಾರ್ ರಿಜುವಿನೇಶನ್ ಆ್ಯಂಡ್ ಅರ್ಬನ್ ಟ್ರಾನ್ಸ್ಫಾರ್ಮೇಶನ್ 2.0 ಕೇಂದ್ರ ಸರ್ಕಾರದ ಯೋಜನೆಯಡಿ ರಾಜ್ಯದ 22 ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 161.60 ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದ್ದು, ಧಾರವಾಡ ಲೋಕಸಭಾ ವ್ಯಾಪ್ತಿಯ ನವಲಗುಂದ, ಕಲಘಟಗಿ, ಶಿಗ್ಗಾಂವ, ಬಂಕಾಪೂರ ಪಟ್ಟಣಗಳಲ್ಲಿ ನೀರು ಸರಬರಾಜು ಕಾಮಗಾರಿಗಳು ಸೇರಿವೆ ಎಂದಿದ್ದಾರೆ.