ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

ಬೆಂಗಳೂರು: ಅಟ್ಟಿಕಾ ಗೋಲ್ಡ್‌‌ ಕಂಪೆನಿ ಮಾಲೀಕ ಬಾಬು ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಾಬು ಅವರು ಕಳ್ಳರು ಕದ್ದಂತ ಬಂಗಾರವನ್ನು ಖರೀದಿ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಆಂಧ್ರ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ವ್ಯಾಪ್ತಿಯಲ್ಲಿರುವ ಅಟ್ಟಿಕಾ ಗೋಲ್ಡ್‌‌‌ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದಿಂದ ಆಂಧ್ರ ಪೊಲೀಸರು ಬಾಬು ಅವರನ್ನು ಅರೆಸ್ಟ್‌ ಮಾಡಿದ್ದಾರೆ. ಬಾಬು ಅವರನ್ನು ವಿಚಾರಣೆಗಾಗಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ