ಅತ್ಯಾಚಾರ ಅಪರಾಧಿಗಳ ಬಿಡುಗಡೆ ಆದೇಶ; ಬಿಲ್ಕಿಸ್ ಬಾನು ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಮರುಪರಿಶೀಲನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. 2002 ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ, ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆಯ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆದಾಗ್ಯೂ, ಗುಜರಾತ್ ಸರ್ಕಾರವು 15 ವರ್ಷಗಳ ಜೈಲುವಾಸದ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.