ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಥಿಯಾ ಶೆಟ್ಟಿ- ಕೆ.ಎಲ್ ರಾಹುಲ್

ಬಾಲಿವುಡ್ ಲವ್ ಬರ್ಡ್ಸ್ ಅಥಿಯಾ ಶೆಟ್ಟಿ ಹಾಗೂ ಕೆ.ಎಲ್ ರಾಹುಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಕಷ್ಟು ವರ್ಷಗಳು ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಈ ಜೋಡಿಯ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಕ್ರಿಕೆಟಿಗ ಕೆ.ಎಲ್ ರಾಹುಲ್ ಹಾಗೂ ನಟಿ ಅಥಿಯಾ ಶೆಟ್ಟಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಸೋಮವಾರ(ಜ.23)ರಂದು ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಿದೆ. ಸುನೀಲ್ ಶೆಟ್ಟಿ ಅವರ ಬಂಗಲೆಯಲ್ಲಿ ಮದುವೆ ನೆರವೇರಿದ್ದು, ಈ ಸಂಭ್ರಮಕ್ಕೆ ಇಡೀ ಬಾಲಿವುಡ್ ಚಿತ್ರರಂಗವೇ ಸಾಕ್ಷಿಯಾಗಿದೆ.
ಮದುವೆಯ ಸಂದರ್ಭದಲ್ಲಿ ಕ್ರೀಮ್ ಬಣ್ಣದ ಲೆಹೆಂಗಾದಲ್ಲಿ ಅಥಿಯಾ ಮಿಂಚಿದ್ರೆ, ಬಳಿ ಬಣ್ಣದ ಕುರ್ತಾ ರಾಹುಲ್ ಧರಿಸಿದ್ದರು.