ರಾಜ್ಯದಲ್ಲಿ ಈ ಬಾರಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಈ ಬಾರಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಈ ಬಾರಿ ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಹೀಗಾಗಿ ನೂರಕ್ಕೆ ನೂರರಷ್ಟು ಈ ಬಾರಿ ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ನೇತೃತ್ವದಲ್ಲಿ ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮೋದಿಯಂತಹ ನಾಯಕ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಹೇಳಿದ್ದಾರೆ.