ಅಧಿಕಾರಿಗೆ ಲಂಚ ನೀಡಲು ಭಿಕ್ಷೆ ಬೇಡಿದ ಅರ್ಜಿದಾರ

ಅಧಿಕಾರಿಗೆ ಲಂಚ ನೀಡಲು ಭಿಕ್ಷೆ ಬೇಡಿದ ಅರ್ಜಿದಾರ
http://udayaprabha.com/wp-content/uploads/2021/10/images-17.jpeg
ಅಧಿಕಾರಿಗೆ ಲಂಚ ನೀಡಲು ಭಿಕ್ಷೆ ಬೇಡಿದ ಅರ್ಜಿದಾರ

ಯಲ್ಲಾಪುರ – ಸಾಮಾನ್ಯವಾಗಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಅಧಿಕಾರಿಗಳ ಒತ್ತಡದಿಂದ ಜನಸಾಮಾನ್ಯರು ಲಂಚ ನೀಡಬೇಕಾದ ಪ್ರಸಂಗ ಎದುರಾಗುವುದು ಖಚಿತ ಎಂಬಷ್ಟು ಸಾಮಾನ್ಯವಾಗಿದೆ. ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಬಯಸಿದ ಅಧಿಕಾರಿಯ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಜನರಿಂದ ಭಿಕ್ಷೆ ಬೇಡಿ ಹಣ ನೀಡಲು ಮುಂದಾದ ಘಟನೆ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ.

ತಟಗಾರ ಗ್ರಾಮದ ಸರ್ವೆ ನಂ 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ಸಹೋದರರಿಬ್ಬರು ವಿಭಾಗ ಮಾಡಿಕೊಂಡಿದ್ದರು. ಇದನ್ನು ಪಹಣಿ ಪತ್ರಿಕೆಯಲ್ಲಿ ದಾಖಲು ಮಾಡಲು ಕಂದಾಯ ಇಲಾಖೆ ಅಧಿಕಾರಿಯೊಬ್ಬರು 2 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಅಚ್ಯುತಕುಮಾರ ಎಂಬುವವರು ಮಂಗಳವಾರ ಸಾರ್ವಜನಿಕರಿಂದ ಭಿಕ್ಷೆ ಬೇಡಿ ಅಧಿಕಾರಿಗೆ ಅವರು ಬಯಸಿದ ಹಣ ನೀಡಲು ಮುಂದಾದರು.

ಭ್ರಷ್ಟಾಚಾರ ಕುರಿತು ಹೋರಾಟ ಮಾಡುವುದಕ್ಕಿಂತ ಮೊದಲು ಅಧಿಕಾರಿಗಳ ಮನಪರಿವರ್ತನೆ ಮಾಡುವುದು ಮುಖ್ಯ ಎಂದು ಭಾವಿಸಿ ಜನರಿಂದ ಭಿಕ್ಷೆ ಬೇಡಿ ಅಧಿಕಾರಿಯ ಬೇಡಿಕೆ ಪೂರೈಸಲು ನಿರ್ಧರಿಸಿದೆ ಎಂದು ಅರ್ಜಿದಾರರಾದ ಅಚ್ಯುತಕುಮಾರ ತಿಳಿಸಿದ್ದಾರೆ.