ಅಧಿವೇಶನಕ್ಕಿಂತ 'ಪಂಚರತ್ನ ರಥಯಾತ್ರೆ' ನನಗೆ ಮುಖ್ಯ : H.D ಕುಮಾರಸ್ವಾಮಿ

ಅಧಿವೇಶನಕ್ಕಿಂತ 'ಪಂಚರತ್ನ ರಥಯಾತ್ರೆ' ನನಗೆ ಮುಖ್ಯ : H.D ಕುಮಾರಸ್ವಾಮಿ

ಮಂಡ್ಯ : ಇಂದಿನ ಅಧಿವೇಶನಕ್ಕಿಂತಲೂ ಪಂಚರತ್ನ ರಥಯಾತ್ರೆ ನನಗೆ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನನಗೆ ಅಧಿವೇಶನಕ್ಕಿಂತ ಪಂಚರತ್ನ ರಥಯಾತ್ರೆಯೇ ಮುಖ್ಯ.

ಕಳೆದ ಮೂರು ದಿನಗಳ ಅಧಿವೇಶನದಲ್ಲಿ ಏನು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 75 ವರ್ಷದಿಂದ ಈ ದೇಶದಲ್ಲಿ ಆಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎನ್ನುವುದು ಪಂಚರತ್ನ ರಥಯಾತ್ರೆಯ ಮೂಲ ಉದ್ದೇಶ ಎಂದು ಹೇಳಿದರು.

ನಾನು ಚುನಾವಣಾ ಗಿಮಿಕ್ ಮಾಡಿಕೊಂಡು ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವುದಿಲ್ಲ. ಈಗಿನ ಬಿಜೆಪಿ ಸರ್ಕಾರ ಆ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಕೊರೊನಾ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಕ್ಕೆ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ಕೊಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದರು.