ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾದ ವಿಪಕ್ಷಗಳು

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಇಂದು 2ನೇ ದಿನಕ್ಕೆ ಕಾಲಿಟ್ಟಿದೆ. 10 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ. ಇದಕ್ಕೆ ಪ್ರತಿಯಾಗಿ ಆಡಳಿತರೂಢ ಬಿಜೆಪಿ ನಾಯಕರೂ ತಯಾರಿ ನಡೆಸಿದ್ದಾರೆ. ಇದರೊಂದಿಗೆ ಇಂದು ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿದಂತೆ ಒಟ್ಟು 4 ಮಸೂದೆ ಮಂಡನೆಯಾಗಲಿವೆ.