ಅನಿಲ್ ದೇಶಮುಖ್ ಗೆ ಜಾಮೀನು ನೀಡಿ ಕೆಲವೇ ನಿಮಿಷಗಳಲ್ಲಿ ತಡೆಹಿಡಿದ ಹೈಕೋರ್ಟ್

ಬಾಂಬೆ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖಗೆ ಜಾಮೀನು ನೀಡಿ ಕೆಲವೇ ನಿಮಿಷಗಳಲ್ಲಿ ಬಾಂಬೆ ಹೈಕೋರ್ಟ್ ತಡೆಹಿಡಿದಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರಿಗೆ ಸೋಮವಾರ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್, ತಕ್ಷಣವೇ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.