ಅನೇಕ ರಾಷ್ಟ್ರಗಳಲ್ಲಿ ಆರ್ಥಿಕ ಹಿಂಜರಿತದ ನಡುವೆಯೂ ರಾಜ್ಯಕ್ಕೆ ಹರಿದು ಬಂತು ಬಂಡವಾಳ

ಬೆಂಗಳೂರು: ಬುದ್ಧಿಮತ್ತೆ ಮತ್ತು ಪರಿಶ್ರಮ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಸಮಾವೇಶದಲ್ಲಿ ಬಂಡವಾಳ ಹೂಡಿಕೆಯಾಗಿದೆ.
ಈಗ ಪ್ರಪಂಚದ ಹಲವು ರಾಷ್ಟ್ರಗಳಲ್ಲಿ ಆರ್ಥಿಕ ಹಿಂಜರಿತವಿದೆ. ಇಂತಹ ಸಂದರ್ಭದಲ್ಲಿಯೂ ಸಮಾವೇಶ ನಡೆಸಲು ಧೈರ್ಯ ತೋರಿದೆವು. ನಮ್ಮ ಜನವೇ ನಮಗೆ ಬಲ, ಕೌಶಲ್ಯಯುತ ಜನರೇ ನಮಗೆ ಬಲ. ನಮ್ಮ ನೀತಿಗಳೇ ನಮಗೆ ಬಲ ಎಂದು ಹೇಳಿದ ಸಿಎಂ, ಕರ್ನಾಟಕ ಇಂದು ಯೋಚಿಸುವುದನ್ನು ಭಾರತ ನಾಳೆ ಯೋಚಿಸುತ್ತದೆ ಎಂದರು.
ಬೆಂಗಳೂರಿಗೆ ಪ್ರತಿದಿನ 10,000 ಇಂಜಿನಿಯರ್ ಗಳು ಬರುತ್ತಾರೆ. ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ನಮ್ಮ ನೀತಿ ಚಿಂತನೆಗಳ ಬದಲಾವಣೆ ನಿರಂತರವಾಗಿ ಮಾಡುತ್ತಿದ್ದೇವೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕಾರ್ಯದಕ್ಷತೆ ಹೆಚ್ಚಾಗಿದ್ದು, ನಾವು ಗಲ್ಫ್ ರಾಷ್ಟ್ರಗಳ ಜೊತೆಗೆ ಸ್ಪರ್ಧೆಗೆ ಮುಂದಾಗುತ್ತಿದ್ದೇವೆ ಎಂದು ಹೇಳಿದ್ದಾರೆ.