ಕೋಡಿ ಹಬ್ಬ, ಉಪ್ಪುಂದ ಜಾತ್ರೆಗಳಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕಿಲ್ಲ ಅವಕಾಶ
ಉಡುಪಿ: ಕುಂದಾಪುರ ತಾ|ನ ಮಹತ್ವದ ಜಾತ್ರೆಗಳಾದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪುಂದ ಜಾತ್ರೆಗಳು ಡಿ.8 & 9ರಂದು ಶುರುವಾಗಲಿದ್ದು, ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಿವೆ. ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿ.9-11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇಗುಲದ ಆವರಣದಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹೇಳಿವೆ.