ಅಪಘಾತ ಪ್ರಕರಣಗಳಲ್ಲಿ ವ್ಯತಿರಿಕ್ತ ಹೇಳಿಕೆ ನೀಡದಂತೆ ಮಾರ್ಗಸೂಚಿ ಹೊರಡಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಅಪಘಾತ ಪ್ರಕರಣಗಳಲ್ಲಿ ತಪ್ಪಿತಸ್ಥ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಶಿಸ್ತು ಪ್ರಾಧಿಕಾರಗಳ ಮುಂದೆ ವ್ಯತಿರಿಕ್ತ ಹೇಳಿಕೆ ನೀಡದಂತೆ ಸೂಕ್ತ ಮಾರ್ಗಸೂಚಿ ಹೊರಡಿಸಬೇಕೆಂದು ಹೈಕೋರ್ಟ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶ ನೀಡಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ಸಾವಿಗೆ ಕಾರಣವಾದ ಆರೋಪದಲ್ಲಿ ಬಸ್ ಚಾಲಕನನ್ನು ಮರು ನೇಮಕ ಮಾಡುವಂತೆ ತುಮಕೂರಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಕೆಎಸ್‌ಆರ್‌ಟಿಸಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ. ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಪೀಠ, 'ಸಂತ್ರಸ್ತರಿಗೆ ಪರಿಹಾರ ನೀಡುವುದರಿಂದ ಕೆಎಸ್‌ಆರ್‌ಟಿಸಿ ನುಣುಚಿಕೊಳ್ಳುವ ತಂತ್ರಗಾರಿಕೆಯಾಗಿದೆ ಮತ್ತು ಸಂತ್ರಸ್ತರಿಗೆ ತಕ್ಷಣ ಸಿಗಬೇಕಾದ ಪರಿಹಾರ ವಿಳಂಬ ಮಾಡುವ ತಂತ್ರವಾಗಿದೆ. ಈ ಅಂಶ ಗಂಭೀರ ಲೋಪವಾಗಿದ್ದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಸೂಚನೆ ನೀಡಿದೆ. ಆದರೆ, ಮೋಟಾರು ಅಪಘಾತ ಪರಿಹಾರ ನ್ಯಾಯ ಮಂಡಳಿಯಲ್ಲಿ ರಸ್ತೆ ಅಪಘಾತಕ್ಕೆ ಚಾಲಕ ಕಾರಣವಲ್ಲ. ದ್ವಿಚಕ್ರ ವಾಹನ ಸವಾರನ ನಿರ್ಲಕ್ಷ್ಯತನದಿಂದ ಘಟನೆ ನಡೆದಿದೆ ಎಂದು ವಾದಿಸಿತ್ತು.