ಅಪ್ರಾಪ್ತ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪಾಪಿ ಪತಿ ಕೊನೆಗೂ ಅರೆಸ್ಟ್

ತುಮಕೂರು: ಅಪ್ರಾಪ್ತ ವಯಸ್ಸಿನ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿ ಮಹಾಶಯನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ತುಮಕೂರು ಜಿಲ್ಲೆ ಕೊರಟಗೆರೆಯ ಆವಲಯ್ಯನ ಪಾಳ್ಯ ನಿವಾಸಿ ಲಕ್ಷ್ಮೀಪತಿ ಎಂದು ಗುರುತಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಪತಿ - ಪತ್ನಿ ನಡುವೆ ಜಗಳ ಆರಂಭವಾಗಿ ಲಕ್ಷ್ಮಿಪತಿ, ತನ್ನ ಪತ್ನಿ ಶೋಭಾಳನ್ನು ಕತ್ತು ಹಿಸುಕಿ ಸಾಯಿಸಿದ್ದ. ಬಳಿಕ ಕುಟುಂಬ ಸಮೇತ ಪರಾರಿಯಾಗಿದ್ದ. ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನೀಡಿದ ದೂರಿನ ಅನ್ವಯ ಪತಿ ಲಕ್ಷ್ಮಿಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.