ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಭೂಕಂಪ: 4.2 ತೀವ್ರತೆ ದಾಖಲು

ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಇಂದು ಬೆಳಗ್ಗೆ 9:04 (IST)ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್‌ನ ದಕ್ಷಿಣ-ಆಗ್ನೇಯದ 79 ಕಿಮೀ ದೂರದಲ್ಲಿ ಹಾಗೂ ಭೂಮಿಯಿಂದ 120 ಕಿಮೀ ಆಳದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.