ಅಫ್ಘಾನಿಸ್ತಾನದ ಮದರಸಾದಲ್ಲಿ ಬಾಂಬ್ ಸ್ಫೋಟ; 15 ಸಾವು

ಅಫ್ಘಾನಿಸ್ತಾನದ ಅಯ್ಬಕ್ ನಗರದ ಜಹ್ದಿಯಾ ಮದರಸಾದಲ್ಲಿ ನ. 30ರಂದು ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದು 27 ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ.ಅಯ್ಬಕ್ ರಾಜಧಾನಿ ಕಾಬೂಲ್‌ನ ಉತ್ತರಕ್ಕೆ ಸುಮಾರು 200 ಕಿ.ಮೀ. ದೂರದಲ್ಲಿದೆ.