ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ : ಶೀಘ್ರವೇ ಆರೋಪಿಗಳ ಬಂಧನ : ಸಿಎಂ ಬೊಮ್ಮಾಯಿ

ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ : ಶೀಘ್ರವೇ ಆರೋಪಿಗಳ ಬಂಧನ : ಸಿಎಂ ಬೊಮ್ಮಾಯಿ

ಮಂಗಳೂರು : ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರ ಕೂಡ ಶಾಂತಿಯುವಾಗಿ ನಡೆದಿದೆ. ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಜನರು ಊಹಾ ಪೋಹಗಳಿಗೆ ಕಿಗೊಡದೆ ಪರಸ್ಪರ ವಿಶ್ವಾಸದಿಂದ ಇರುವ ಅಗತ್ಯವಿದೆ. ಪೊಲೀಸರು ಯಾವುದೆ ಒತ್ತಡ ಇಲ್ಲದೇ ಮುಕ್ತವಾಗಿ ತನಿಖೆ ಮಾಡಲಿದ್ದಾರೆ. ಆರೋಪಿಗಳು ಯಾರೇ ಇದ್ದರೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.