ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಪ್ರಭು ಚವಾಣ್

ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಪ್ರಭು ಚವಾಣ್

ಔರಾದ್: 'ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು ಬೆಂಬಲಿಸಬೇಕು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ತಾಲ್ಲೂಕಿನ ಹೆಡಗಾಪುರ ಗ್ರಾಮದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ,'ಬಿಜೆಪಿ ಸರ್ಕಾರ ಬಂದ ಮೇಲೆ ರಾಜ್ಯ ಹಾಗೂ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ.

ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಈ ಭಾಗದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ' ಎಂದು ತಿಳಿಸಿದರು.

'ಕಾಂಗ್ರೆಸ್‍ನವರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಸದಸ್ಯರು ತಲೆ ಕೆಡಿಸಿಕೊಳ್ಳದೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು' ಎಂದು ಹೇಳಿದರು.

ಕೌಠಾ, ಬೆಳಕುಣಿ (ಚೌ) ಹಾಗೂ ಕೌಡಗಾಂವ್ ಗ್ರಾಮಗಳಲ್ಲಿ ಪ್ರಚಾರ ಸಭೆ ನಡೆಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಪ್ರಧಾನ ಕಾರ್ಯದರ್ಶಿ ಹಣಮಂತ ಸುರನಾರ್, ಮುಖಂಡರಾದ ವಸಂತ ವಕೀಲ್, ಶ್ರೀಮಂತ ಪಾಟೀಲ, ಮಹಾದೇವ ತರನಳ್ಳೆ, ಶಿವಕುಮಾರ ಪಾಂಚಾಳ, ಸಚಿನ್ ರಾಠೋಡ, ಬಾಬುರಾವ ಬಿರಾದಾರ ಹಾಗೂ ಪ್ರಕಾಶ ಜೀರ್ಗೆ ಇದ್ದರು.