ಅಭ್ಯರ್ಥಿ ಘೋಷಣೆಗೂ ಮುನ್ನ ಗುಬ್ಬಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

ಅಭ್ಯರ್ಥಿ ಘೋಷಣೆಗೂ ಮುನ್ನ ಗುಬ್ಬಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

ಜಿ.ಎಸ್ ಪ್ರಸನ್ನಕುಮಾರ್ತುಮಕೂರು: ಗುಬ್ಬಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಎಸ್ ಪ್ರಸನ್ನಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಈ ಕುರಿತು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಗೌಡ ಮಾಹಿತಿ ನೀಡಿದ್ದಾರೆ.ಗುಬ್ಬಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಾವುಗಳು ತಮ್ಮದೇ ಸ್ವ-ಹಿತಾಸಕ್ತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೀತಿ, ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಪಕ್ಷದ ವರಿಷ್ಠರುಗಳ ತೀರ್ಮಾನ ಹಾಗೂ ಪಕ್ಷದ ಸಿದ್ಧಾಂತಗಳ ವಿರುದ್ಧವಾಗಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಘನತೆ ಗೌರವಗಳಿಗೆ ಹಾನಿಯುಂಟು ಮಾಡುವಂತಹ ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಮಾನ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ವರಿಷ್ಠರುಗಳ ಅನುಮೋದನೆಯ ಮೇರೆಗೆ ತಮ್ಮನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಛಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.