ಅಮರ್ ಜವಾನ್ ಜ್ಯೋತಿ ಆರುತ್ತಿರುವುದು ದುಃಖದ ಸಂಗತಿ: ರಾಹುಲ್ ಗಾಂಧಿ

ನವದೆಹಲಿ: 'ಅಮರ್ ಜವಾನ್' ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ಸೂಚಿಸಿದ್ದಾರೆ.
'ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿ ಇಂದು ಆರುತ್ತಿರುವುದು ಅತ್ಯಂತ ದುಃಖದ ಸಂಗತಿ.
ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ 50 ವರ್ಷಗಳಿಂದ ಜ್ವಲಿಸುತ್ತಿದ್ದ ಅಮರ್ ಜವಾನ್ ಜ್ಯೋತಿಯನ್ನು ಸಮೀಪದ ಯುದ್ಧ ಸ್ಮಾರಕದಲ್ಲಿರುವ ಅಮರ್ ಚಕ್ರದಲ್ಲಿರುವ ಜ್ಯೋತಿಯೊಂದಿಗೆ ವಿಲೀನಗೊಳಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜ್ಯೋತಿಯನ್ನು ಆರಿಸುತ್ತಿಲ್ಲ, ಬದಲಿಗೆ ವಿಲೀನಗೊಳಿಸಲಾಗುತ್ತಿದೆ ಎಂಬ ಸ್ಪಷ್ಟೀಕರಣವನ್ನೂ ಸರ್ಕಾರ ನೀಡಿದೆ.
बहुत दुख की बात है कि हमारे वीर जवानों के लिए जो अमर ज्योति जलती थी, उसे आज बुझा दिया जाएगा।
— Rahul Gandhi (@RahulGandhi) January 21, 2022
कुछ लोग देशप्रेम व बलिदान नहीं समझ सकते- कोई बात नहीं…
हम अपने सैनिकों के लिए अमर जवान ज्योति एक बार फिर जलाएँगे!