'ಅಮಾನವೀಯತೆಗೆ ಮತ್ತೊಂದು ಹೆಸರೇ ಬೊಮ್ಮಾಯಿ ಸರ್ಕಾರ' : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

'ಅಮಾನವೀಯತೆಗೆ ಮತ್ತೊಂದು ಹೆಸರೇ ಬೊಮ್ಮಾಯಿ ಸರ್ಕಾರ' : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಅಮಾನವೀಯತೆಗೆ ಮತ್ತೊಂದು ಹೆಸರೇ ಬೊಮ್ಮಾಯಿ ಸರ್ಕಾರ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.

ಅಂಗನವಾಡಿ ಕಾರ್ಯಕರ್ತೆಯರು ಹಲವು ದಿನಗಳಿಂದ ಪ್ರತಿಭಟಿಸುತ್ತಿದ್ದರೂ ತಿರುಗಿ ನೋಡದ ಸರ್ಕಾರ ಪೊಲೀಸರ ಮೂಲಕ ದೌರ್ಜನ್ಯ ಎಸಗುತ್ತಿದೆ. ಪ್ರತಿಭಟನೆಯಲ್ಲಿದ್ದ ಕಾರ್ಯಕರ್ತೆ ನೀಲಮ್ಮ ಅಸ್ವಸ್ಥಗೊಂಡು ಅಸುನೀಗಿದ್ದಾರೆ. ಇದು ಬೇಜವಾಬ್ದಾರಿ ಸರ್ಕಾರ ನಡೆಸಿದ ಕೊಲೆ, ಅಮಾನವಿಯತೆಗೆ ಮತ್ತೊಂದು ಹೆಸರೇ ಬೊಮ್ಮಾಯಿ ಸರ್ಕಾರ ಎಂದು ಕಾಂಗ್ರೆಸ್ ಕಿಡಿಕಾರಿದೆ.