ಅಮಿತಾಬ್ ಬಚ್ಚನ್ ಅವರಿಗೆ ಭಾರತ ರತ್ನ ನೀಡಬೇಕು: ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ಅವರಿಗೆ ಭಾರತ ರತ್ನ ನೀಡಬೇಕು: ಮಮತಾ ಬ್ಯಾನರ್ಜಿ

ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರಿಗೆ ಭಾರತ ರತ್ನ ಪ್ರಧಾನ ಮಾಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧ್ವನಿ ಎತ್ತಿದ್ದಾರೆ. ಕೋಲ್ಕತಾದಲ್ಲಿ ನಡೆದ 28ನೇ ಕೋಲ್ಕತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಲ್ಲಿ ಮಮತಾ ಬ್ಯಾನರ್ಜಿ ಅಭಿಮಾನಿಗಳೆಲ್ಲರ ಸಮ್ಮುಖದಲ್ಲಿ 'ಅಮಿತಾಬ್ ಬಚ್ಚನ್ ಅವರು ಲೆಜೆಂಡ್, ಜೀವಂತ ದಂತಕಥೆ ಎಂದು ನಾನು ಭಾವಿಸುತ್ತೇನೆ. ಅವರು ಭಾರತದ ಐಕಾನ್. ಅವರಿಗೆ ಭಾರತ ರತ್ನ ನೀಡಬೇಕು' ಅವರಿಗೆ ಧನ್ಯವಾದಗಳು ಎಂದಿದ್ದಾರೆ.