ಅಮಿತ್ ಶಾʼರ ರ್ಯಾಲಿಯಿಂದ ಹಿಂದಿರುಗುವಾಗ ಘೋರ ದುರಂತ; 2 ಬಸ್‌ಗೆ ಟ್ರಕ್ ಡಿಕ್ಕಿಯಾಗಿ 8 ಸಾವು, 50 ಮಂದಿಗೆ ಗಾಯ

ಸಿಧಿ (ಮಧ್ಯಪ್ರದೇಶ) : ಮಧ್ಯಪ್ರದೇಶದ ಸಿಧಿಯಲ್ಲಿ ಶುಕ್ರವಾರ ತಡರಾತ್ರಿ ಟ್ರಕ್‌ವೊಂದು ಎರಡು ಬಸ್‌ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.
ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಟ್ರಕ್‌ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಮುಕೇಶ್ ಶ್ರೀವಾಸ್ತವ, ಎಸ್ಪಿ, ರೇವಾ ಹೇಳಿದರು, 'ಎರಡು ಬಸ್ಸುಗಳು ನಿಂತಿದ್ದವು, ಹಿಂದಿನಿಂದ ಟ್ರಕ್ ಬಂದು ಅದರ ಟೈರ್ ಒಡೆದ ನಂತರ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದೆ ಜನರು ಗಾಯಗೊಂಡಿದ್ದಾರೆ, ಅದರಲ್ಲಿ 15-20 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ.ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಶಾ, 'ಸಿಧಿ (ಎಂಪಿ) ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದೇವರು ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಆಡಳಿತದಿಂದ ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.' ಎಂದಿದ್ದಾರೆ.