ಅಮೃತ್ ಪಾಲ್' ಜಾಮೀನು ಅರ್ಜಿ ಮತ್ತೆ ವಜಾ : ಮಾಜಿ 'IPS' ಅಧಿಕಾರಿಗೆ ಜೈಲೇ ಗತಿ

ಬೆಂಗಳೂರು: ಅಕ್ರಮ ಪಿಎಸ್‌ಐ ನೇಮಕಾತಿ ಪರೀಕ್ಷೆ ( PSI Recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಂಡಿದೆ.
ಅಕ್ರಮ ಪಿಎಸ್‌ಐ ನೇಮಕಾತಿ ಪರೀಕ್ಷೆ ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ಬೆಂಗಳೂರಿನ 24ನೇ ಸಿಸಿ ಹೆಚ್ ಕೋರ್ಟ್, ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಿದೆ. ತನಿಖೆ ಸಂಪೂರ್ಣವಾಗಿಲ್ಲ, ಕೆಲ ಆಯಾಮಗಳ ತನಿಖೆ ಮಾತ್ರ ಮುಂದುವರೆದಿದೆ, ಜಾಮೀನು ನೀಡದಂತೆ ವಕೀಲ ಪ್ರಸನ್ನ ಕುಮಾರ್ ಭಟ್ ವಾದ ಮಂಡಿಸಿದ್ದರು. ಈ ಹಿನ್ನೆಲೆ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ
ಅಂದಹಾಗೇ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಅಮೃತ್ ಪಾಲ್ ಅವರು ನೇಮಕಾತಿ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಲಕ್ಷ ಲಕ್ಷ ಡೀಲ್ ಮೂಲಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿರೋದಾಗಿ ತನಿಖೆಯಿಂದ ತಿಳಿದು ಬಂದಿತ್ತು. ಬ್ಲೂಟೂತ್ ಬಳಸಿ ಅಕ್ರಮ ವೆಸಗಿರೋದಾಗಿಯೂ ತಿಳಿದಿತ್ತು. ಈಗಾಗಗೇ ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.