ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ : ತಾಯಿ, ಮಗು ಸೇರಿ 6 ಜನರು ಸಾವು

ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ : ತಾಯಿ, ಮಗು ಸೇರಿ 6 ಜನರು ಸಾವು

ಕ್ಯಾಲಿಪೋರ್ನಿಯಾ : ಅಮೆರಿಕದ ಕ್ಯಾಲಿಪೋರ್ನಿಯಾದ ಗೊಶೆನ್ ಎಂಬಲ್ಲಿ ಗುಂಡಿನ ದಾಳಿಯಲ್ಲಿ 6 ತಿಂಗಳ ಮಗು, ತಾಯಿ ಸೇರಿ 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಧ್ಯ ಕ್ಯಾಲಿಫೋರ್ನಿಯಾದ ಮನೆಯೊಂದರಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ತಾಯಿ ಮತ್ತು ಆಕೆಯ 6 ತಿಂಗಳ ಮಗು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ವಿಸಾಲಿಯಾದಿಂದ ಪೂರ್ವಕ್ಕಿರುವ ಅಸಂಘಟಿತ ಗೋಶೆನ್ ನಲ್ಲಿರುವ ನಿವಾಸದ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ತಾಯಿ, ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವನ್ನಪ್ಪಿದ್ದಾರೆ. ಹತ್ಯೆಗಳ ಹಿಂದೆ ಗ್ಯಾಂಗ್ ನಂಟು ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ