ಅರಣ್ಯಾಧಿಕಾರಿಯನ್ನು ಮಾತೃ ಇಲಾಖೆಗೆ ಕಳಿಸಲು ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಯಲಹಂಕ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್ ಕೃಷ್ಣ ಅವರನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶುಕ್ರವಾರ ಆದೇಶಿಸಿದ್ದಾರೆ. ಗಿರಿನಾಥ್ ಅವರು ಶುಕ್ರವಾರ ಬೆಳಿಗ್ಗೆ ನಗರ ಪ್ರದಕ್ಷಿಣೆ ನಡೆಸಿದ್ದು, ಯಲಹಂಕದಲ್ಲಿ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಆರ್. ಕೃಷ್ಣ ರವರು ರಸ್ತೆ ಬದಿಯ ಮರಗಳ ಕೊಂಬೆಗಳು, ಅಪಾಯ ಸ್ಥಿತಿಯಲ್ಲಿರುವ ಮರ/ಮರದ ಕೊಂಬೆಗಳನ್ನು ತೆಗೆಯಲು ಅಗತ್ಯ ಕ್ರಮ ಕೈಗೊಳ್ಳದೇ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೆ ಅವರನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ಸೂಚನೆ ನೀಡಿದರು.