ಅರವಿಂದ ಜತ್ತಿಗೆ ಅನುಭವ ಮಂಟಪ ಪ್ರಶಸ್ತಿ

ಬಸವಕಲ್ಯಾಣ: ಬೆಂಗಳೂರು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರಿಗೆ ಪ್ರಸಕ್ತ ಸಾಲಿನ 'ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ' ಘೋಷಿಸಲಾಗಿದೆ. ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ.
ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನವೆಂಬರ್ 28 ರಂದು ನಡೆಯುವ 42 ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.