ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಯೋಜನೆಗಳ ಜಾರಿಗೆ ಹೊಸ ನೀತಿ

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಯೋಜನೆಗಳ ಜಾರಿಗೆ ಹೊಸ ನೀತಿ

ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಲು ಯೋಜನೆಗಳ ಜಾರಿಗೆ ಹೊಸ ನೀತಿ ಜಾರಿಗೆ ತರಲಾಗುವುದು.

ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಸಂಘಟಿತ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡಲು ಹೊಸ ನೀತಿ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

ರೆಡಿಮೇಡ್ ಗಾರ್ಮೆಂಟ್ಸ್, ಆಪ್ ಆಧಾರಿತ ವಾಹನಗಳ ಚಾಲಕರು, ಆಹಾರ ಹಾಗೂ ಇತರೆ ವಸ್ತುಗಳ ಡೆಲಿವರಿ ನೀಡುವವರು, ನಿರ್ಮಾಣ ಕ್ಷೇತ್ರ ಮೊದಲಾದ ವಲಯಗಳ ಕೆಲಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವುದು ಹೊಸ ನೀತಿಯ ಉದ್ದೇಶವಾಗಿದೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ಭವಿಷ್ಯ ನಿಧಿ ಸೌಲಭ್ಯ, ಆರೋಗ್ಯ ವಿಮೆ, ಇಎಸ್‌ಐ, ವಾರದ ರಜೆ ಮೊದಲಾದವುಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ನೌಕರರು ಕೆಲಸ ಮಾಡುವ ಸಂಸ್ಥೆಗಳಿಂದ ಹಣಕಾಸಿನ ನೆರವು ಪಡೆದು ಸೌಲಭ್ಯ ಜಾರಿಗೊಳಿಸಲಾಗುವುದು. ಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳು ಸಿಗುತ್ತಿರುವಂತೆಯೇ ಅಸಂಘಟಿತ ವಲಯದವರೆಗೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಮೀಕ್ಷೆ ಆರಂಭವಾಗಿದ್ದು ಹೊಸ ನೀತಿಯನ್ನು ಜಾರಿಗೊಳಿಸಲು ಕಾರ್ಮಿಕ ಇಲಾಖೆ ನಿಯಮಗಳನ್ನು ರೂಪಿಸುತ್ತಿದೆ ಎಂದು ಹೇಳಲಾಗಿದೆ.