ಅಸಿಡ್ ದಾಳಿಗೆ ಒಳಗಾದ ಮಹಿಳೆಯರ ಮಾಸಾಶನ ಹೆಚ್ಚಳ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಹಲೋ ಕಂದಾಯ ಸಚಿವರೆ ( 72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ) ಸಹಾಯ ವಾಣಿಯನ್ನು ಲೋಕಾರ್ಪಣೆ ಮಾಡಿದರು.
ಬಡವರ ಮನೆ ಬಾಗಿಲಿಗೆ ಸರ್ಕಾರ ಎಂಬ ಧ್ಯೇಯದ್ದೋಶದಿಂದ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಪಟ್ಟಿಯಲ್ಲಿ ಇದು ಕೂಡ ಒಂದಾಗಿದೆ. ರಾಜ್ಯದಲ್ಲಿ ಆಸಿಡ್ ದಾಳಿಗೆ ಒಳಗಾಗಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ೩ ಸಾವಿರ ಮಾಸಾಶನವನ್ನು ೧೦ ಸಾವಿರ ರೂಪಾಯಿಗೆ ಸರ್ಕಾರ ಹೆಚ್ಚಿಸಿದೆ.ಇದೆ ಸಂದರ್ಭದಲ್ಲಿ ಸಂತ್ರಸ್ತ ಫಲಾನುಭವಿಗಳಿಗೆ ಇಂದು ಸಿಎಂ ಪ್ರಮಾಣಪತ್ರ ಕೂಡ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಾಸಕರಾದ ಎಂ ಕೃಷ್ಣಪ್ಪ, ರಿಜ್ವಾನ್ ಅರ್ಷದ್, ಎಂ ಪಿ ಕುಮಾರಸ್ವಾಮಿ, ಸಂಸದ ಪಿ ಸಿ ಮೋಹನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ, ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ ಮತ್ತು ಇತರರು ಉಪಸ್ಥಿತರಿದ್ದರು.