ಆದಿತ್ಯ ಠಾಕ್ರೆ ಬರ್ತ್ ಡೇ ಸ್ಪೆಷಲ್: ಒಂದು ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ!

ಮುಂಬೈ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ರೀತಿಯಲ್ಲಿ ಸೆಡ್ಡು ಹೊಡೆಯಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ಗೆ 100 ದಾಟಿದ್ದರೂ ಉದ್ಧವ್ ಠಾಕ್ರೆ ಜನ್ಮದಿನ ಪ್ರಯುಕ್ತ ಕೇವಲ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ.
ಮಹಾರಾಷ್ಟ್ರದ ಡೊಂಬಿವಲಿ ಯುವ ಸೇನೆ ಈ ರೀತಿ ವಿಶೇಷ ಪ್ರಯತ್ನ ಮಾಡಿದೆ. ಅಲ್ಲಿನ ಉಸ್ಮಾ ಪೆಟ್ರೋಲ್ ಬಂಕ್ನಲ್ಲಿ ಭಾನುವಾರ ಬೆಳಗ್ಗೆಯಿಂದ ಕೇವಲ ಒಂದು ರೂಪಾಯಿಗೆ 1 ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 102 ರೂಪಾಯಿ ತಲುಪಿರುವಾಗ ಇಷ್ಟೊಂದು ಕಡಿಮೆ ಬೆಲೆಗೆ ಪೆಟ್ರೋಲ್ ಸಿಗುತ್ತಿರುವ ವಿಚಾರ ತಿಳಿದ ಜನರು ಬೆಳಗ್ಗೆಯಿಂದಲೂ ಕ್ಯೂ ನಿಂತು ಪೆಟ್ರೋಲ್ ಹಾಕಿಸಿಕೊಂಡು ಹೋಗಿದ್ದಾರೆ. ಬೆಳಗ್ಗೆ 10ರಿಂದ 12 ಗಂಟೆಯವರೆಗೆ ಈ ರೀತಿ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಿರುವುದಾಗಿ ತಿಳಿಸಲಾಗಿದೆ.
ಅದೇ ರೀತಿ ಅಂಬರನಾಥ ಪ್ರದೇಶದ ವಿಮ್ಕೊ ನಾಕಾ ಬಳಿಯ ಪೆಟ್ರೋಲ್ ಪಂಪ್ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ 50 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ನಂತೆ ಮಾರಾಟ ಮಾಡಿರುವುದಾಗಿ ತಿಳಿಸಲಾಗಿದೆ.