ಧಾರವಾಡ : ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಇಂದು (ಮೇ.17) ಬೆಳಿಗ್ಗೆ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಅವರು ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ನಮಿಸಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ವಾರ್ತಾ ಇಲಾಖೆಯ ಸಹಾಯಕ ವಾರ್ತಾ ಅಧಿಕಾರಿ ಡಾ.ಸುರೇಶ ಹಿರೇಮಠ ಸೇರಿದಂತೆ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.