ಆಧಾರವಿಲ್ಲದೇ ಕಾಂಗ್ರೆಸ್ ನಾಯಕರು ಆರೋಪ: ಸಿ.ಟಿ ರವಿ ಕೆಂಡಾಮಂಡಲ

ಆಧಾರವಿಲ್ಲದೇ ಕಾಂಗ್ರೆಸ್ ನಾಯಕರು ಆರೋಪ: ಸಿ.ಟಿ ರವಿ ಕೆಂಡಾಮಂಡಲ

ಬೆಂಗಳೂರು: ರಾಜ್ಯ ಸರ್ಕಾರ ತರಾತುರಿ ಟೆಂಡರ್ ಕರೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರ ಆರೋಪಕ್ಕೆ ಶಾಸಕ ಸಿ.ಟಿ ರವಿ ಕೆಂಡಾಮಂಡಲರಾಗಿದ್ದಾರೆ.

ಆಧಾರವಿಲ್ಲದೇ ಕಾಂಗ್ರೆಸ್ ನಾಯಕರು ಆರೋಪ ಮಾಡ್ತಿದ್ದಾರೆ.

ಇದು ಸತ್ಯವಾಗಿದ್ರೆ ವಿಧಾನಸಭೆಯಲ್ಲಿ ಯಾಕೆ ಮಾತನಾಡಲಿಲ್ಲ. ಹೊರಗಡೆ ಹೋಗಿ ಆರೋಪ ಮಾಡ್ತಿದ್ದಾರೆ ಅಷ್ಟೇ. ದಾಖಲೆ ಇಟ್ಟುಕೊಂಡು ಕಾಂಗ್ರೆಸ್​ ನಾಯಕರು ದೂರು ನೀಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಹೇಳಿಕೆ ಸರಿಯಲ್ಲ ಎಂದು ಕಾಂಗ್ರೆಸ್ ಆರೋಪಕ್ಕೆ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಇತ್ತ ಬಿ.ಎಸ್‌ ಯಡಿಯೂರಪ್ಪ ಕೂಡ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು. ತಲೆ ತಿರುಕರು ಹೀಗೆ ಮಾತಾಡೋದು. ತಲೆ ಸರಿ ಇದ್ದವರು ಯಾರೂ ಕೂಡ ಈ ರೀತಿ ಮಾತಾಡಲ್ಲ. ಅಧಿಕಾರದ ಭ್ರಮೆಯಿಂದ ನಾವು ಅಧಿಕಾರಕ್ಕೆ ಬಂದೆ ಬಿಟ್ಟಿದ್ದೇವೆಂದು ಹೀಗೆ ಹುಚ್ಚುಚ್ಚಾಗಿ ಮಾತಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.