ಸಿದ್ದರಾಮಯ್ಯ ಅವರಿಂದ ನನಗೆ ಸರ್ಟಿಫಿಕೆಟ್ ಬೇಕಿಲ್ಲ, ಅದರ ಅಗತ್ಯವೂ ನನಗಿಲ್ಲ: ಆರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ನನಗೆ ಸರ್ಟಿಫಿಕೆಟ್ ಬೇಕಿಲ್ಲ.ಅದರ ಅಗತ್ಯವೂ ನನಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿಯಂತ ಅನೇಕರನ್ನು ಕುಮಾರಸ್ವಾಮಿ ಮತ್ತೆ ಕಾಂಗ್ರೆಸ್‌ನವರು ಹುಟ್ಟಿ ಹಾಕಿದ್ದಾರೆಯೇ ವಿನಃ, ಬಿಜೆಪಿಯವರಲ್ಲ.ಸಿದ್ದರಾಮಯ್ಯ ಕೆಲವೊಂದು ಶಬ್ದಗಳನ್ನು ಬಳಕೆ ಮಾಡುತ್ತಿದ್ದಾರೆ, ನಿಜಕ್ಕೂ ಈ ಮಾತುಗಳು ಅವರಿಗೆ ಶೋಭೆ ತರುವಂತದ್ದಲ್ಲ ಎಂದರು.