ಸುರತ್ಕಲ್ : ಮತ್ತೆ ಮುಂದುವರೆದ ನೈತಿಕ ಪೊಲೀಸ್ ಗಿರಿ; ಆರು ಜನ ಆರೋಪಿಗಳ ಬಂಧನ
ಮಂಗಳೂರು: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ - ಯುವತಿಯನ್ನು ತಡೆದು ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಘಟನೆಯ ವಿವರ: ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರನ್ನು 5-6 ಜನರ ಗುಂಪು ಫಾಲೋ ಮಾಡಿದ್ದಾರೆ.
ಪ್ರಕರಣ ದಾಖಲಿಸಿ, ತಕ್ಷಣ ಕಾರ್ಯಚರಣೆಗೆ ಇಳಿದ ಪೊಲೀಸರು ಆರೋಪಿಗಳಾದ ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ರನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ.