ಆರೋಗ್ಯ ಸಂಜೀವಿನಿ ಯೋಜನೆ' : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಆರೋಗ್ಯ ಸಂಜೀವಿನಿ ಯೋಜನೆ' : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ನಿರ್ಧರಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಇತ್ತೀಚೆಗೆ 7ನೇ ವೇತನ ಆಯೋಗ ಶಿಫಾರಸ್ಸುಗಳನ್ನು ಜಾರಿ ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1, 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ. 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿತ್ತು, ಇದಿಗ ಕ್ಯಾಶ್ ಲೆಸ್ ಆರೋಗ್ಯ ಸೇವೆ ಒದಗಿಸಿದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ.

ಈ ಯೋಜನೆಗೆ ಸರ್ಕಾರ 1250 ಕೋಟಿ ವೆಚ್ಚ ಪಡಿಸಿದೆ. ಯೋಜನೆ ಜಾರಿಯಾದ್ರೆ ನೌಕರರು ಹಾಗೂ ಕುಟುಂಬದವರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗಿದೆ, ಚಿಕಿತ್ಸೆ ಪಡೆಯುವ ಆಸ್ಪತ್ರೆಯವರಿಗೆ ನೀಡಿ ಚಿಕಿತ್ಸೆ ಪಡೆಯಬಹುದು, ಈ ಯೋಜನೆ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅಲಂಬಿತರನ್ನ ಒಳಗೊಳ್ಳುತ್ತದೆ.