ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ಕನ್ಫರ್ಮ್

ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ಕನ್ಫರ್ಮ್

ವದೆಹಲಿ: ನಂಜನಗೂಡು ಕಾಂಗ್ರೆಸ್ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯುಗಾದಿ ದಿನದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಇನ್ನು ನಂಜನಗೂಡು ಟಿಕೆಟ್ ಹಂಚಿಕೆ ವಿಚಾರವಾಗಿ ಹೆಚ್.ಸಿ.ಮಹದೇವಪ್ಪ ಸ್ಪರ್ಧಿಸಲ್ಲ ಎಂದಿದ್ದಾರೆ ಎಂದರು.

ಮಹದೇವಪ್ಪ ನಂಜನಗೂಡಿನಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವುದರಿಂದ ಆರ್.ಧ್ರುವನಾರಾಯಣ ಪುತ್ರ ದರ್ಶನ್ ಗೆ ಟಿಕೆಟ್ ಕೊಡುತ್ತೇವೆ. ನಾನು ಧ್ರುವನಾರಾಯಣ ಪುತ್ರನ ಪರವಾಗಿದ್ದೇನೆ ಎಂದು ಹೇಳಿದರು. ಈ ಮೂಲಕ ನಂಜನಗೂಡು ಟಿಕೆಟ್ ದರ್ಶನ್ ಗೆ ಕನ್ಫರ್ಮ್ ಆಗಿದೆ.