ಆರ್ಥಿಕತೆಗೆ ನಲುಗಿದ ಪಾಕ್‌ಗೆ ʻಪವರ್ʼ ಶಾಕ್; ಪ್ರಮುಖ ನಗರಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೇ ಜನರ ಪರದಾಟ

ನವದೆಹಲಿ: ಪಾಕಿಸ್ತಾನದಲ್ಲಿ ಭಾರೀ ಪ್ರಮಾಣದ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇಸ್ಲಾಮಾಬಾದ್, ಲಾಹೋರ್ ಮತ್ತು ಕರಾಚಿಯ ಪ್ರಮುಖ ಭಾಗಗಳಲ್ಲಿ ಗಂಟೆಗಟ್ಟಲೆ ವಿದ್ಯುತ್ ಇಲ್ಲ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಗ್ರಿಡ್ ವೈಫಲ್ಯದಿಂದಾಗಿ ಇಂದು ಬೆಳಗ್ಗೆ 7:30 ರ ಸುಮಾರಿಗೆ ಕರಾಚಿ, ಲಾಹೋರ್, ಇಸ್ಲಾಮಾಬಾದ್ ಮತ್ತು ಕ್ವೆಟ್ಟಾ ಸೇರಿದಂತೆ ಪಾಕಿಸ್ತಾನದ ಹಲವಾರು ಪ್ರಮುಖ ನಗರಗಳಲ್ಲಿ ವಿದ್ಯುತ್ ಸ್ಥಗಿತವಾಗಿದೆ ಎಂದು ವರದಿಗಳು ತಿಳಿಸಿವೆ.