ಆಸ್ಕರ್ ಪ್ರಶಸ್ತಿ' ರೇಸ್ ನಲ್ಲಿ ಕಾಂತಾರ: ಹೊಂಬಾಳೆ ಫಿಲ್ಮ್ಸ್ ಅಧಿಕೃತ ಘೋಷಣೆ

ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿದ ಕಾಂತಾರ ಚಿತ್ರ ದಾಖಲೆಗಳನ್ನು ಧೂಳೀಪಟ ಮಾಡಿದ ಬೆನ್ನಲ್ಲೇ ಮತ್ತೊಂದು ಮೈಲುಗಲ್ಲು ನೆಟ್ಟಿದೆ. ಅದೇನಪ್ಪಾ ಅಂದರೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪಟ್ಟಿಗೆ ಸೇರ್ಪಡೆಗೊಂಡಿದೆ.'ಹೊಂಬಾಳೆ ಫಿಲ್ಮ್ಸ್' ಈ ವಿಷಯವನ್ನು ಹಂಚಿಕೊಂಡಿದೆ. ಈ ಮೂಲಕ ಆಸ್ಕರ್ ರೇಸ್ ನಲ್ಲಿರುವ ವಿಷಯವನ್ನು ದೃಢಪಡಿಸಿದೆ. ‘ಆಸ್ಕರ್ ರೇಸ್ನಲ್ಲಿ ಸ್ಪರ್ಧೆ ಮಾಡಲು ನಾವು ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಅಂತಿಮ ನಾಮನಿರ್ದೇಶನ ಪಟ್ಟಿ ಇನ್ನಷ್ಟೇ ಬರಬೇಕಿದೆ’ ಎಂದು ವಿಜಯ್ ಹೇಳಿದ್ದಾರೆ.