ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಂತ್ ಬದಲಿಗೆ ಆಡಲು ಸಿದ್ಧವಾದ ಬ್ಯಾಟರ್

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಂತ್ ಬದಲಿಗೆ ಆಡಲು ಸಿದ್ಧವಾದ ಬ್ಯಾಟರ್

ಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಕನಿಷ್ಠ 9 ತಿಂಗಳು ಕ್ರಿಕೆಟ್‌ನಿಂದ ದೂರವುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಆಸ್ಟ್ರೇಲಿಯಾ ವಿರುದ್ದ ನಡೆಯಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ, ಐಪಿಎಲ್ ತಪ್ಪಿಸಿಕೊಳ್ಳುವುದು ಖಚಿತವಾಗಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ಪಂತ್ ಅಪಘಾತದಲ್ಲಿ ಗಾಯಗೊಂಡು ಹೊರಗುಳಿದಿರುವುದು ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಪಂತ್ ಮುಖ್ಯ ಪಾತ್ರ ವಹಿಸುವ ಸಾಧ್ಯತೆ ಇತ್ತು.

ಪಂತ್ ಹೊರಗುಳಿದ ನಂತರ ಅವರ ಸ್ಥಾನಕ್ಕೆ ಆಯ್ಕೆಯಾಗಲು ಹಲವು ಪ್ರಮುಖ ವಿಕೆಟ್ ಕೀಪರ್ ಗಳು ಇದ್ದಾರೆ. ಆದರೆ, ಭಾರತ ಎ ತಂಡದಲ್ಲಿ ಆಡಿರುವ ಕೆಎಸ್ ಭರತ್ ತಂಡದಲ್ಲಿ ಅವಕಾಶ ಪಡೆಯುವುದು ಬಹುತೇಕ ಖಚಿತವಾಗಿದೆ.

ಕೆಎಸ್ ಭರತ್ ಈಗಾಗಲೇ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧತೆ ಆರಂಭಿಸಿದ್ದಾರೆ. ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಸಾಮರ್ಥ್ಯದ ಬಗ್ಗೆ ಭರತ್ ಆತ್ಮವಿಶ್ವಾಸದಿಂದ ಇದ್ದಾರೆ. ತಂಡ ಬಯಸಿದ್ದಲ್ಲಿ, ಯಾವುದೇ ಕ್ರಮಾಂಕದಲ್ಲಿ ಬೇಕಾದರೂ ಬ್ಯಾಟಿಂಗ್ ಮಾಡಲಿ ಸಿದ್ಧವಾಗಿದ್ದಾರೆ.

ನಾನು ಪರಿಪೂರ್ಣ ಬ್ಯಾಟರ್ ಮತ್ತು ವಿಕೆಟ್ ಕೀಪರ್

ಆಧುನಿಕ ಕ್ರಿಕೆಟ್‌ನಲ್ಲಿ ಕೀಪರ್ ಸಮರ್ಥ ಬ್ಯಾಟರ್ ಆಗಿರಬೇಕು ಎನ್ನುವ ಭರತ್, ನಾನು ಯಾವಾಗಲೂ 100 ಪ್ರತಿಶತ ಕೀಪರ್ ಮತ್ತು 100 ಪ್ರತಿಶತ ಬ್ಯಾಟರ್ ಆಗಿರುತ್ತೇನೆ. 70 ಪ್ರತಿಶತ ಬ್ಯಾಟರ್, 30 ಪ್ರತಿಶತ ಕೀಪರ್ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.

ನಾನು ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಕಾಲಿಟ್ಟಾಗ ಆರಂಭಿಕ ಬ್ಯಾಟರ್ ನಂತೆ ಉತ್ತಮವಾಗಿ ಆಡುತ್ತೇನೆ. ಯಾವುದೇ ಪರಿಸ್ಥಿತಿ ಅಥವಾ ಸನ್ನಿವೇಶದಲ್ಲಿ ನಾನು ಅತ್ಯುತ್ತಮ ವಿಕೆಟ್ ಕೀಪರ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.