ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

ಮುಂಬೈ, ಅ.೬-ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಪ್ರತಿಷ್ಠಿತ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಇಂದು ಮುಂಬೈನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿತು.
ಇಂದು ಮುಂಜಾನೆ ಭಾರತ ತಂಡ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ಆಟಗಾರರು ಮತ್ತು ಸಹಾಯಕ ಗುಂಪಿನ ಫೋಟೊವನ್ನು ಬಿಸಿಸಿಐ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದೆ.
ಪಿಕ್ಷರ್ ಪರ್ಫೆಕ್ಟ್. ಲೈಟ್ಸ್ ಡು ದಿಸ್ ಟೀಂ ಇಂಡಿಯಾ ಆಡಲು ಇಲ್ಲಿಗೆ ಬಂದಿದ್ದೇವೆ ಎಂದು ಬಿಸಿಸಿಐ ತಿಳಿಸಿದೆ.
ಈ ತಿಂಗಳ ೧೬ರಿಂದ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಭಾರತದ ಅಭಿಯಾನ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ ವಿರುದ್ದ ಅಕ್ಟೋಬರ್ ೨೩ರಂದು ಪ್ರಾರಂಭವಾಗಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಈಗಾಗಲೇ ಟಿಕೆಟ್‌ಗಳು ಖಾಲಿಯಾಗಿವೆ. ಈ ರೋಚಕ ಕಾದಾಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
೨೦೦೭ರಲ್ಲಿ ಪ್ರಶಸ್ತಿ ಗೆದ್ದಿದ್ದ ಭಾರತ, ಈ ಬಾರಿಯಾದರೂ ಪ್ರಶಸ್ತಿ ಮೇಲೆ ಟೀಂ ಇಂಡಿಯಾ ಕಣ್ಣಿಟ್ಟಿದೆ. ಸೂಪರ್ ೧೨ ಹಂತಕ್ಕೂ ಮುನ್ನ ಭಾರತ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅಕ್ಟೋಬರ್ ೧೭ ಮ್ತು ಅಕ್ಟೋಬರ್ ೧೯ರಂದು ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಈ ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಗಾಯಾಳುವಾಗಿ ಟೂರ್ನಿಯಿಂದ ಹೊರಬಿದ್ದಿರುವುದು ಭಾರತ ತಂಡಕ್ಕೆ ಹೊಡೆತ ಬಿದ್ದಿ