ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು: ಸಚಿವ ಡಾ. ಕೆ ಸುಧಾಕರ್

ಬೆಂಗಳೂರು: ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ವರ್ಲ್ಡ್ ಸ್ಟ್ರೋಕ್ ಡೇ ಅಂಗವಾಗಿ ಬೆಂಗಳೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆದ ' ಬೆಂಗಳೂರು ಸ್ಟ್ರೋಕ್ ನರ್ಸಿಂಗ್ ಕಾನ್ ಕ್ಲೈವ್ 2022" ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಶೇ.
ಬಡ ಹಾಗೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಇದು ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ ಎಂದು ಹೇಳಿದರು. ಅಕ್ಟೋಬರ್ 29 ರಂದು ವಿಶ್ವ ಸ್ಟ್ರೋಕ್ ದಿನವನ್ನಾಚರಿಸಲಾಗುತ್ತಿದೆ. ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಈ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು ಸತತವಾಗಿ ನಡೆಯುತ್ತಿವೆ. ಅಚ್ಚರಿ ಅಂದರೆ ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿಗಿಗಿಂತ ಸಕ್ಕರೆ ಕಾಯಿಲೆ,
ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಅಸಾಂಕ್ರಮಿಕ ರೋಗಗಳಿಂದ ಉಂಟಾಗುತ್ತಿರುವ ಸಾವು ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿ ಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಂಡಿವೆ. ರೋಗ ಬಂದ ಮೇಲೆ ಚಿಕಿತ್ಸೆ ನೀಡುವುದಕ್ಕಿಂತ ರೋಗ ಬಾರದೆ ಇರುವ ಹಾಗೇ ನೋಡಿಕೊಳ್ಳುವುದೇ ಉತ್ತಮ. ಹೀಗಾಗಿ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಗಳು ಸರ್ಕಾರದಿಂದಲೇ ನಡೆಯುತ್ತಿದೆ ಎಂದು ಸಚಿವರು ಹೇಳಿದ್ದಾರೆ.