ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

ಇಂಗ್ಲೆಂಡ್ ಕ್ರಿಕೆಟ್ ಟೀಂನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು, ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಪ್ ಗೇರ್ ಕಾರ್ಯಕ್ರಮ ಸಂಚಿಕೆಯ ಚಿತ್ರೀಕರಣದ ವೇಳೆ ಫ್ಲಿಂಟಾಫ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸೆಟ್‌ನಲ್ಲಿದ್ದ ವೈದ್ಯಕೀಯ ತಂಡ ಅವರಿಗೆ ಚಿಕಿತ್ಸೆ ನೀಡಿತು. ಅವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಪಘಾತದಿಂದ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎನ್ನಲಾಗಿದೆ.