ಇಂಜಿನಿಯರಿಂಗ್ ಪ್ರವೇಶದ ಅವಧಿ ಮುಂದೂಡಿಕೆ.!

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಕೊನೆಯ ದಿನವನ್ನು ನ.30ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕೋರ್ಸ್ ಪ್ರವೇಶಕ್ಕೆ ಅ.25 ಕೊನೆ ದಿನ ಆಗಿತ್ತು. ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕ ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಮೊರೆಹೋಗಿತ್ತು.