ಇಂಟರ್ನ್ ಮೇಲೆ ಹಲ್ಲೆ ಆರೋಪ: ವಕೀಲರ ವಿರುದ್ಧದ ಪ್ರಕರಣ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು, : ಬೆಂಗಳೂರಿನ ವಕೀಲರ ನೇತೃತ್ವದ ಖಾಸಗಿ ಕಾನೂನು ಸಂಸ್ಥೆಯಲ್ಲಿ ಇಂಟರ್ನ್ ಅವಧಿಯಲ್ಲಿದ್ದ ಸಹಾಯಕಿ ಮೇಲೆ ಹಲ್ಲೆ ನಡೆಸಿರುವುದು ಮತ್ತು ಆಕೆಗೆ ಕಿರುಕುಳ ನೀಡಿರುವುದಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.
ವಕೀಲ ವಸಂತ್ ಆದಿತ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತು.
ಅರ್ಜಿದಾರ ವಕೀಲ ಮತ್ತು ದೂರುದಾರೆ ಕಾನೂನು ವಿದ್ಯಾರ್ಥಿನಿಯು ಕೇಸ್ ಬಾಕಿ ಇದ್ದಾಗ ರಾಜೀ ಮಾಡಿಕೊಂಡಿದ್ದಾರೆ. ಕರ್ನಾಟಕ ವಕೀಲರ ಪರಿಷತ್‍ನಲ್ಲಿ ವಕೀಲರ ವಿರುದ್ಧ ದಾಖಲಿಸಿದ್ದ ದೂರನ್ನು ವಿದ್ಯಾರ್ಥಿನಿಯು ಹಿಂಪಡೆದಿದ್ದಾರೆ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
ಸಂಧಾನದ ಬಳಿಕ ಆರೋಪಿ ವಕೀಲರು ವಿದ್ಯಾರ್ಥಿನಿಗೆ ಇಂಟರ್ನ್‍ಶಿಪ್ ಸರ್ಟಿಫಿಕೇಟ್ ನೀಡಿದ್ದಾರೆ. ಈ ಕೇಸ್ ಸಂಧಾನದಲ್ಲಿ ಕೊನೆಗೊಂಡಿದ್ದರಿಂದ ಅಂತ್ಯ ಕಾಣಿಸಲು ತಮ್ಮ ಯಾವುದೇ ಆಕ್ಷೇಪಣೆ ಇಲ್ಲ ಎಂದು ಕಾನೂನು ವಿದ್ಯಾರ್ಥಿನಿಯು ತಿಳಿಸಿದ್ದಾರೆ. ಹೀಗಾಗಿ, ಬೆಂಗಳೂರಿನ ಹಲಸೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾ ಮಾಡಿದೆ.