ಇಂದಿನಿಂದ 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ & ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು (ಜ.16) ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಜ.16 & 17ರಂದು ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಬೊಮ್ಮಾಯಿ ಹುಬ್ಬಳ್ಳಿಯಿಂದ & ಬಿಎಸ್‌ವೈ ಬೆಂಗಳೂರಿನಿಂದ ಪ್ರತ್ಯೇಕವಾಗಿ ತೆರಳಲಿದ್ದು, ಎರಡು ದಿನಗಳ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.