ಇಂದಿನಿಂದ 7 ದಿನಗಳ ಕಾಲ ಚಿಕ್ಕಬಳ್ಳಾಪುರ ಉತ್ಸವ

ಇಂದಿನಿಂದ 7 ದಿನಗಳ ಕಾಲ ಚಿಕ್ಕಬಳ್ಳಾಪುರ ಉತ್ಸವ

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಸುಧಾಕರ್‌‌ ಮುಂದಾಳತ್ವದಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಜೃಂಭಣೆಯಿಂದ ಚಿಕ್ಕಬಳ್ಳಾಪುರ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂದು (ಜ.7) ಉತ್ಸವಕ್ಕೆ ಚಾಲನೆ ದೊರೆಯಲಿದೆ. ಒಂದು ವಾರಗಳ ಕಾಲ ಚಿಕ್ಕಬಳ್ಳಾಪುರ ಉತ್ಸವ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳು ನಡೆದಿವೆ. ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯ ಮರಳು ಸಿದ್ದೇಶ್ವರ ದೇವಾಲಯದ ಬಳಿ ಉತ್ಸವಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಿಲಾನಂದನಾಥ ಶ್ರೀಗಳು ಚಾಲನೆ ನೀಡಲಿದ್ದಾರೆ.